ಕಣಜದ ಹುಳುಗಳ ದಾಳಿ: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಸಾವು
09/08/2022
ಕಣಜದ ಹುಳುಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.
ಮೃತರನ್ನು ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮೃತ ಕೃಷ್ಣರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























