ಶಾರುಖ್ ಮತ್ತು ಪ್ರಿಯಾಂಕಾಗಿಂತ, ನಾನೇ ಸೂಪರ್ ಹೋಸ್ಟ್: ತನ್ನನ್ನು ತಾನೇ ಹೊಗಳಿಕೊಂಡ ಕಂಗನಾ
ಕಂಗನಾಗೆ ವಿವಾದ ಹೊಸದಲ್ಲ. ಅಭಿನಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರೂ ನಿರೂಪಕರಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈ ವರ್ಷದ ಫೆಬ್ರವರಿಯಲ್ಲಿ ಕಂಗನಾ ಏಕ್ತಾ ಕಪೂರ್ ಅವರ ಲಾಕ್ ಅಪ್ ಎಂಬ ರಿಯಾಲಿಟಿ ಶೋ ಮೂಲಕ ನಿರೂಪಕರಾಗಿ ಪಾದಾರ್ಪಣೆ ಮಾಡಿದರು.
ಒಟಿಟಿಯಲ್ಲಿ ಕಾರ್ಯಕ್ರಮ ಚೆನ್ನಾಗಿ ನಡೆಯುತ್ತಿರುವಾಗಲೇ ನಟಿ ತಮ್ಮ ನಿರೂಪಣೆಯನ್ನು ತಾನೇ ಹೊಗಳಿಕೊಂಡಿದ್ದು, ಇತರ ನಟ ನಟಿಯರನ್ನು ಕೆಣಕಿದ್ದಾರೆ. ಶಾರುಖ್ ಖಾನ್, ಅಕ್ಷಯ್ ಕುಮಾರ್, ಪ್ರಿಯಾಂಕಾ ಚೋಪ್ರಾ ಮತ್ತು ರಣವೀರ್ ಸಿಂಗ್ ಅವರಿಗಿಂತ ತಾನೇ ‘ಸೂಪರ್ ಸ್ಟಾರ್ ಹೋಸ್ಟ್’ ಎಂಬ ಹೇಳಿಕೆಯೊಂದು ನೀಡಿದ್ದಾರೆ.
ನಟಿ ತನ್ನ Instagramನಲ್ಲಿ ಈ ರೀತಿ ಬರೆದಿದ್ದಾರೆ. ಎಸ್ ಆರ್ ಕೆ, ಅಕ್ಷಯ್ ಕುಮಾರ್, ಪ್ರಿಯಾಂಕಾ ಚೋಪ್ರಾ ಮತ್ತು ರಣವೀರ್ ಸಿಂಗ್ ಅವರಂತಹ ಅನೇಕ ನಟರು ಪ್ರಸ್ತುತಿಯಲ್ಲಿ ಪ್ರಯತ್ನಗಳನ್ನು ಮಾಡಿದ್ದಾರೆ. ಅವರು ಯಶಸ್ವಿ ವೃತ್ತಿಜೀವನವನ್ನು ಹೊಂದಿರಬಹುದು, ಆದರೆ ಅವರು ಹೋಸ್ಟಿಂಗ್ ನಲ್ಲಿ ವಿಫಲರಾಗಿದ್ದಾರೆ. ಇಲ್ಲಿಯವರೆಗೆ ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್ ಮತ್ತು ಕಂಗನಾ ರಣಾವತ್ ಮಾತ್ರ ಸೂಪರ್ ಸ್ಟಾರ್ ಹೋಸ್ಟ್ ಅರ್ಹತೆ ಗಿಟ್ಟಿಸಿದವರು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ
ಕುವೈತ್ ನಲ್ಲಿ ವಿಜಯ್ ನಟನೆಯ ಬೀಸ್ಟ್ ಚಿತ್ರಕ್ಕೆ ನಿಷೇಧ: ಕಾರಣ ಏನು ಗೊತ್ತಾ?
‘ನಮ್ಮ ಭೂಮಿ ನಮ್ಮ ಆರೋಗ್ಯ’; ಇಂದು ವಿಶ್ವ ಆರೋಗ್ಯ ದಿನ
ದ್ವಿತೀಯ ಪಿಯು ಪರೀಕ್ಷೆಯಲ್ಲೂ ಹಿಜಾಬ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ರಹೀಂ ಉಚ್ಚಿಲ್ ಗೆ ಸದ್ದಿಲ್ಲದೇ ಶಾಕ್ ನೀಡಿದ ರಾಜ್ಯ ಸರ್ಕಾರ
ಉತ್ತರ ಪತ್ರಿಕೆಯಲ್ಲಿ “ಪುಷ್ಪಾ… ಪುಸ್ಪರಾಜ್” ಎಂದು ಬರೆದಿಟ್ಟ ವಿದ್ಯಾರ್ಥಿನಿ: ಶಿಕ್ಷಕರು ಕಂಗಾಲು




























