ಏಟು: ನಟಿ, ಬಿಜೆಪಿ ಸಂಸದೆ ಕಂಗನಾಗೆ ಏರ್ ಪೋರ್ಟ್ ನಲ್ಲಿ ಕಪಾಳ ಮೋಕ್ಷ..!

06/06/2024

ಬಾಲಿವುಡ್‌ ನಟಿ ಹಾಗೂ ಬಿಜೆಪಿ ಪಕ್ಷದ ನೂತನ ಸಂಸದೆ ಕಂಗನಾ ರನೌತ್‌ ರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ. ಈ ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ ಮಾಡಿದ್ದಾರೆ. ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ನೀಡಿದ್ದ ಹೇಳಿಕೆಗೆ ಬಗ್ಗೆ ಸಿಐಎಸ್‌ಎಫ್ ಸಿಬ್ಬಂದಿ ಆಕೆಯನ್ನು ಕಂಡಾಗ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದರಿಂದ ಆಕ್ರೋಶಗೊಂಡ ಚಂಡೀಗಢ ಏರ್‌ಪೋರ್ಟಿನ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.
ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version