11:00 PM Tuesday 14 - October 2025

ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲ್ಲ ಅನ್ನೋದು ಅಸತ್ಯ, ಭಟ್ಟಂಗಿತನ: ಕನ್ಹಯ್ಯ ಕುಮಾರ್ ವಿರುದ್ಧ ನಟ ಚೇತನ್ ಆಕ್ರೋಶ

chethan ahimsa
30/09/2021

ಬೆಂಗಳೂರು:  ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ವಿರುದ್ಧ ನಟ ಚೇತನ್ ಅಹಿಂಸಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆಯಲ್ಲಿ ಸತ್ಯವಿಲ್ಲ, ಇದು ಭಟ್ಟಂಗಿತನ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ಹಯ್ಯ ಕುಮಾರ್ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ. ಹೊಸದಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಅವರು,  ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದು ಅಸತ್ಯ ಮತ್ತು ಭಟ್ಟಂಗಿತನ. ಕಾಂಗ್ರೆಸ್ ಮತ್ತು ಬಿಜೆಪಿಯ ಅವಕಾಶವಾದ ಮತ್ತು ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಮತ್ತು ಭಾರತ ಉತ್ತಮವಾಗಿರುತ್ತದೆ ಎಂದು ಚೇತನ್ ಹೇಳಿದ್ದಾರೆ.

ಕನ್ಹಯ್ಯ ಕುಮಾರ್ ಮಂಗಳವಾರ ಕಮ್ಯುನಿಸ್ಟ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಜೊತೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಕನ್ಹಯ್ಯ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು. ಬಳಿಕ ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡಿದರು. ಈ ಹೇಳಿಕೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಮಂಗಳೂರು: ನಿಮ್ಮ ವಾಹನದ ವಿಮೆ ಅವಧಿ ಮುಗಿದಿದ್ದರೆ 4 ಸಾವಿರದವರೆಗೆ ದಂಡ ಖಚಿತ

ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆಗೆ ಹೊಸ ತಿರುವು: ನಾಪತ್ತೆಯಾದ ದಿನ ಹಣ ಡ್ರಾ ಮಾಡಿದ್ದ ಗಿರಿರಾಜ್!

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಆಟವಾಡುತ್ತಿದ್ದ ಮಗುವಿನ ಮೇಲೆ ಹತ್ತಿದ ಕಾರು: ಮಗುವಿನ ದಾರುಣ ಸಾವು

ವ್ಯಕ್ತಿಗೆ ಕೊವಿಡ್ ಲಸಿಕೆಯ ಬದಲು ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ನರ್ಸ್!

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚಿನ ಸುದ್ದಿ

Exit mobile version