ಹೊಸ ಅಧ್ಯಾಯ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭಕ್ಕೆ ದಿನಾಂಕ ಘೋಷಣೆ - Mahanayaka

ಹೊಸ ಅಧ್ಯಾಯ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭಕ್ಕೆ ದಿನಾಂಕ ಘೋಷಣೆ

bigboss
16/09/2024

ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 11 ಇದೇ ತಿಂಗಳಿನಲ್ಲಿ ಆರಂಭಗೊಳ್ಳಲಿದೆ. ಈ ಬಾರಿಯೂ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ಈ ಬಾರಿ ಆ್ಯಂಕರ್ ಬದಲಾವಣೆ ಆಗ್ತಾರೆ ಎನ್ನಲಾಗಿತ್ತು. ಆದ್ರೆ ಸುದೀಪ್ ಅವರೇ ಈ ಬಾರಿಯೂ ನಿರೂಪಣೆ ಮಾಡಲಿದ್ದಾರೆ.

ಸೆಪ್ಟಂಬರ್ 29ರಂದು ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ಆರಂಭಗೊಳ್ಳಲಿದೆ. ಈಗಾಗಲೇ ಸ್ಪರ್ಧಿಗಳ ಆಯ್ಕೆಯನ್ನ ನಡೆಸಲಾಗ್ತಿದೆ. ಯಾರೆಲ್ಲ ಈ ಬಾರಿ ಸ್ಪರ್ಧಿಗಳಾಗಲಿದ್ದಾರೆ ಎನ್ನುವ ಅಪ್ ಡೇಟ್ ಮುಂದೆ ಬರಲಿದೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಕಿಚ್ಚ ಸುದೀಪ್ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಸೀಸನ್ ಹೊಸ ಅಧ್ಯಾಯ ಅಂತ ಪ್ರೊಮೋದಲ್ಲಿ ಸುದೀಪ್ ಹೇಳಿದ್ದಾರೆ.

ಇನ್ನೂ ಸ್ಪರ್ಧಿಗಳನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಚಾರದಲ್ಲಿರುವ ಸ್ಪರ್ಧಿಗಳಿಗೆ ಮಣೆ ಹಾಕುವ ಸಾಧ್ಯತೆಗಳಿವೆ, ನಟ ನಟಿಯರು, ಪತ್ರಕರ್ತರು, ಸ್ವಾಮೀಜಿ, ಗುರೂಜಿಗಳು ಸ್ಪರ್ಧಿಗಳಾಗುವ ಸಾಧ್ಯತೆಗಳಿವೆ. ಸ್ಪರ್ಧಿಗಳಿಗೆ ಸಂಬಂಧಿಸಿದ ಅಪ್ ಡೇಟ್ ಸದ್ಯದಲ್ಲೇ ಹೊರ ಬೀಳಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ