ಗಾಂಧಿ ಕಥನದ ಲೇಖಕ ಡಿ.ಎಸ್.ನಾಗಭೂಷಣ ಇನ್ನಿಲ್ಲ - Mahanayaka
12:41 PM Wednesday 15 - October 2025

ಗಾಂಧಿ ಕಥನದ ಲೇಖಕ ಡಿ.ಎಸ್.ನಾಗಭೂಷಣ ಇನ್ನಿಲ್ಲ

nagabushan
19/05/2022

ಗಾಂಧಿ ಕಥನ ವನ್ನು ಬರೆಯುವ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಡಿ.ಎಸ್.ನಾಗಭೂಷಣ ರವರು ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಇವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು.


Provided by

ಇವರು ಬರೆದ ಗಾಂಧಿ ಕಥನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತ್ತು,ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು.

ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನ್ನು  ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ'(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ದು ತಮ್ಮ ಪತ್ನಿ ಹಿರಿಯ ಲೇಖಕಿ ಸವಿತಾ ನಾಗಭೂಷಣರೊಂದಿಗೆ ಶಿವಮೊಗ್ಗದಲ್ಲಿ ವಾಸವಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಕೊಚ್ಚಿ ಮೆಟ್ರೋ ಇನ್ನು ಮುಂದೆ ಮದುವೆ ಫೋಟೋಶೂಟ್‌ ಗೆ ಲಭ್ಯ!

ಜೂನ್ 9 ರಿಂದ ಪಿಯು ತರಗತಿ ಆರಂಭ: ಸಮವಸ್ತ್ರ ಕಡ್ಡಾಯ!

ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ಬಾಲಕಿಯರದ್ದೇ ಮೇಲುಗೈ

ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ: ಗಾಯದ ಮೇಲೆ ಬರೆ!

ತಲೆ ನೋವಾಗುತ್ತಿದೆ ಎಂದು ಕೋಣೆಗೆ ತೆರಳಿದ ಸ್ಯಾಕ್ಸೋಫೋನ್ ವಾದಕಿ ನೇಣಿಗೆ ಶರಣು

 

ಇತ್ತೀಚಿನ ಸುದ್ದಿ