ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ ಅವರ ಕಾರು ಅಪಘಾತ
11/09/2024
ಬೆಂಗಳೂರು: ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ ಅವರ ಕಾರು ಅಪಘಾತವಾಗಿದ್ದು, ಅಪಘಾತದ ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನ ಮುಂದಿನ ಚಕ್ರ ಕಳಚಿ ಬಿದ್ದಿದ್ದು, ಅಪಘಾತದ ತೀವ್ರತೆಯನ್ನು ತೋರುವಂತಿತ್ತು.
ಕಿರಣ್ ರಾಜ್ ಜೊತೆಗೆ ಬೆಂಜ್ ಕಾರಿನಲ್ಲಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೂಡ ಇದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಕಿರಣ್ ರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ ಅವರ ಎದೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: