ಒಡಿಶಾ ರೈಲು ದುರಂತ: ಎಷ್ಟು ಮಂದಿ ಕನ್ನಡಿಗರು ಸೇಫ್ ಆಗಿದ್ದಾರೆ..?

03/06/2023

ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.

ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬೆಂಗಳೂರಿನಿಂದ ಹೌರಾ ಎಕ್ಸ್ ​ಪ್ರೆಸ್​ನಲ್ಲಿ ಪ್ರಯಾಣಿಸುತ್ತಿದ್ದ 110 ಜನ ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ದುರಂತದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10:30ಕ್ಕೆ ಬೈಯ್ಯಪ್ಪನಹಳ್ಳಿ ನಿಲ್ದಾಣದಿಂದ ಒಡಿಶಾ ಮಾರ್ಗವಾಗಿ ತೆರಳಬೇಕಿದ್ದ ಬೆಂಗಳೂರು–ಗುವಾಹಟಿ ರೈಲು ಬೆಂಗಳೂರು ರೈಲು ನಿಲ್ದಾಣದಲ್ಲೇ ನಿಂತಿದೆ. ಹೀಗಾಗಿ ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬೆಂಗಳೂರಿನಿಂದ ಒಡಿಶಾಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಜನರು ರೈಲು ಬರುತ್ತೆ ಎಂದು ಕಾದು ಕುಳಿತಿದ್ದಾರೆ. ಮತ್ತೊಂದೆಡೆ ಜನರಲ್ ಟಿಕೆಟ್ ಪಡೆದಿದ್ದ ಪ್ರಯಾಣಿಕರಿಗೆ ಹಣ ವಾಪಸ್‌ ನೀಡಲಾಗುತ್ತಿದೆ. ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಹಣ ವಾಪಸ್ ನೀಡಲಾಗುತ್ತಿದೆ.

ಇನ್ನು ಒಡಿಶಾ ಮಾರ್ಗದಲ್ಲಿ ತೆರಳುವ ರೈಲುಗಳ ಸಂಚಾರ ನಾಳೆ ಕೂಡ ಬಹುತೇಕ ರದ್ದಾಗಲಿದೆ. ಹೀಗಾಗಿ ಪ್ರಯಾಣಿಕರು ರೈಲು ಮುಖಾಂತರ ಒಡಿಶಾಗೆ ಹೋಗಲು ಇನ್ನೆರಡು ದಿನ ಅಸಾಧ್ಯ.

ರೈಲು ನಿಲ್ದಾಣದಲ್ಲಿ ಸಹಾಯವಾಣಿ ಕೇಂದ್ರ ಓಪನ್:

ಇನ್ನು ರೈಲ್ವೆ ಅಧಿಕಾರಿಗಳು ಕರ್ನಾಟಕದ ಪ್ರಯಾಣಿಕರ ಮಾಹಿತಿಯನ್ನು ಕಲೆ ಹಾಕ್ತಿದ್ದಾರೆ. ಸಹಾಯವಾಣಿ ಮೂಲಕ ಮಾಹಿತಿ ಪಡೆಯುವ ಪ್ರಯತ್ನ ನಡೆಯುತ್ತಿದೆ. ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಲ್ಲೂ ಸಹಾಯವಾಣಿ ಓಪನ್ ಮಾಡಲಾಗಿದೆ. ಈ ನಿಲ್ದಾಣದಿಂದ ಹೊರಟ ಪ್ರಯಾಣಿಕರ ಮಾಹಿತಿ ಪಡೆಯಲು ಪ್ರಯತ್ನ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version