‘ಕಾಂತಾರ’ ಚಿತ್ರದ  ಕ್ಲೈಮ್ಯಾಕ್ಸ್ ದೃಶ್ಯ ನೋಡಿ ಕಿರುಚಾಡಿದ ಮಹಿಳೆ: ವಿಡಿಯೋ ವೈರಲ್

kanthara
02/10/2022

ಕನ್ನಡದ ಹೊಸ ಸಿನಿಮಾ ‘ ಕಾಂತಾರ’ ಸಿನಿಮಾ ರಿಲೀಸ್ ಆಗಿದ್ದು ಇದು ಸಿನಿಪ್ರೇಕ್ಷಕರನ್ನು ದಿಗ್ಭಮೆಗೊಳಿಸಿದೆ. ಈ ಸಿನಿಮಾ ಸ್ಯಾಂಡಲ್ ವುಡ್ ನ ಮೈಲಿಗಲ್ಲು ಎಂದರೆ ತಪ್ಪಾಗಲ್ಲ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ಈ ‘ಕಾಂತಾರ’.‌ ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ.

ಇನ್ನು ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಊಹೆಗೂ ನಿಲುಕದಂತಹ ಅಭಿನಯ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೆ, ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಇದೀಗ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರು ಕಿರುಚಾಡಿದ್ದು, ಅವರ ಮೇಲೆ ದೈವ ಆವಾಹನೆಯಾಗಿದೆ ಎಂದು ಜನ ನಂಬಿದ್ದಾರೆ.

ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ ಎನ್ನಲಾದ ಘಟನೆ ಮಂಗಳೂರಿನಲ್ಲಿ ಪಿವಿಆರ್ ಮಾಲ್ ನಲ್ಲಿ ನಡೆದಿದೆ. ಇದ್ರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version