ಕಾಂತಾರ ಚಿತ್ರ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು - Mahanayaka

ಕಾಂತಾರ ಚಿತ್ರ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

kanthara
24/10/2022

ಕಾಂತಾರ ಸಿನಿಮಾ ವೀಕ್ಷಿಸಿ ಚಿತ್ರಮಂದಿರದಿಂದ ಹೊರ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ನಡೆದಿದೆ.

ನಾಗಮಂಗಲ ತಾಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್(45)  ಮೃತಪಟ್ಟವರು ಎಂದು ಹೇಳಲಾಗಿದೆ.  ಸಿನಿಮಾ ವೀಕ್ಷಿಸಿ ಸಿನಿಮಾ ಮಂದಿರದಿಂದ ಹೊರ ಬರುತ್ತಿದ್ದ ವೇಳೆ ಎದೆ ನೋವಿನಿಂದ ಕುಸಿದು ಬಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ರಾಜಶೇಖರ್ ಅಕಾಲಿಕ ನಿಧನದಿಂದ ಅವರ ಕುಟುಂಬಸ್ಥರು ತೀವ್ರ ದುಃಖಿತರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ