ವಿಶ್ವಕಪ್ ಗೆದ್ದ ಕಪಿಲ್ ದೇವ್ ಅವರಿಗೆ ಹೃದಯಾಘಾತ! - Mahanayaka
11:02 AM Friday 19 - December 2025

ವಿಶ್ವಕಪ್ ಗೆದ್ದ ಕಪಿಲ್ ದೇವ್ ಅವರಿಗೆ ಹೃದಯಾಘಾತ!

23/10/2020

ನವದೆಹಲಿ: ಭಾರತಕ್ಕೆ ವಿಶ್ವಕಪ್ ತಂದಿದ್ದ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರಿಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ.

ಕಪಿಲ್ ದೇವ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿದೆ. ಲಘು ಹೃದಯಾಘಾತದ ಬಳಿಕ ಅವರನ್ನು ನವದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೂ ಕಪಿಲ್ ದೇವ್ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ವಿವಿಧ ಗಣ್ಯರು, ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ