ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ: ಸಂಘಪರಿವಾರದ ಅಭ್ಯರ್ಥಿಗೆ ಸೋಲು - Mahanayaka

ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ: ಸಂಘಪರಿವಾರದ ಅಭ್ಯರ್ಥಿಗೆ ಸೋಲು

17/05/2024


Provided by

ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಖ್ಯಾತ ವಕೀಲ ಕಪಿಲ್ ಸಿಬಲ್ ಆಯ್ಕೆಯಾಗಿದ್ದಾರೆ. ಅವರಿಗೆ 1066 ಮತಗಳು ಬಿದ್ದರೆ ಸಂಘ ಪರಿವಾರದ ಬೆಂಬಲಿಗನಾಗಿ ಕಣಕ್ಕಿಳಿದಿದ್ದ ನ್ಯಾಯವಾದಿ ಪ್ರದೀಪ್ ರಾಯ್ಕ್ ಅವರು 689 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.

ಹಾಲಿ ಅಧ್ಯಕ್ಷ ಅಗರ್ವಾಲ್ ಅವರಿಗೆ 296 ಮತಗಳು ಬಿದ್ದಿವೆ. 50 ವರ್ಷಗಳಿಂದ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿರುವ ಕಪಿಲ್ ಸಿಬಲ್ ಅವರು ಇದೀಗ ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ನಾಲ್ಕನೇ ಬಾರಿ ಆಯ್ಕೆಯಾಗಿದ್ದಾರೆ.. 1997 98ರಲ್ಲಿ ಅವರು ಕೊನೆಯ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ