ಕಪ್ಪು ಬಣ್ಣದ ಬಟ್ಟೆ ಧರಿಸಿ ಪ್ರತಿಭಟನೆಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ!
ಬೆಂಗಳೂರು: ನಿನ್ನೆಯಷ್ಟೇ ಇಡಿ ವಿಚಾರಣೆ ಎದುರಿಸಿದ್ದ ಕಾಂಗ್ರೆಸ್ ನ ಹಿರಿಯ ನಾಯಕ, ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಡೆದ ಪ್ರತಿಭಟನೆಯ ವೇಳೆ ವಿಭಿನ್ನ ವಸ್ತ್ರದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದ್ದಾರೆ.
ಕಪ್ಪು ಬಣ್ಣದ ಕುರ್ತಾ, ಬಿಳಿ ಪಂಚೆ ಉಟ್ಟುಕೊಂಡಿದ್ದ ಖರ್ಗೆ ಅವರು, ತಲೆಗೆ ಕಪ್ಪು ಬಣ್ಣದ ರೂಮಾಲ್ ಕಟ್ಟಿಕೊಂಡಿದ್ದಾರೆ. ಕಾಲಿಗೆ ಕೂಡ ಕಪ್ಪು ಬಣ್ಣದ ಶೂ ಧರಿಸಿದ್ದಾರೆ.
ಇಂದು ದೇಶಾದ್ಯಂಥ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗೆ ಮಲ್ಲಿಕಾರ್ಜುನ ಖರ್ಗೆ ಅವರು ವಿಭಿನ್ನ ವಸ್ತ್ರದ ಮೂಲಕ ಆಗಮಿಸಿದ್ದು, ಕೇಂದ್ರ ಸರ್ಕಾರದ ಆಡಳಿತ ಖಂಡಿಸುವ ನಿಟ್ಟಿನಲ್ಲಿ ಕಪ್ಪು ಬಣ್ಣದ ವಸ್ತ್ರ ಧರಿಸಿದ್ದಾರೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























