ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಉಡುಪಿ, ಎ.18: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಾವಿರಾರು ಕಾರ್ಯಕರ್ತರ ಜಾಥದೊಂದಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು.
ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಸಾವಿರಾರು ಮಂದಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ ಕಾಂಗ್ರೆಸ್ ಕಛೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿದರು.
ಅಲ್ಲಿಂದ ಅವರು ಕಾಪು ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾ ಎಂ.ಎ. ಗಫೂರ್, ಕಾಪು ದಿವಾಕರ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw