ಕಾಪು: ಪೊಲೀಸ್ ಕ್ವಾರ್ಟಸ್ ನಲ್ಲೇ ಸಾವಿಗೆ ಶರಣಾದ ಮಹಿಳಾ ಸಿಬ್ಬಂದಿ!

ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟಸ್ ನಲ್ಲೇ ನೇಣುಬಿಗಿದು ಸಾವಿಗೆ ಶರಣಾಗಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಜ್ಯೋತಿ(28) ಸಾವಿಗೆ ಶರಣಾದ ಮಹಿಳಾ ಸಿಬ್ಬಂದಿಯಾಗಿದ್ದಾರೆ. ಶುಕ್ರವಾರ ಎಂದಿನಂತೆಯೇ ಕರ್ತವ್ಯ ಮುಗಿಸಿ ಅವರು ಕ್ವಾರ್ಟಸ್ ಗೆ ಬಂದಿದ್ದರು. ಆದ್ರೆ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ, ಜ್ಯೋತಿ ಅವರ ಪತಿ KSRTC ಸಿಬ್ಬಂದಿಯಾಗಿದ್ದು, ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಸಾವಿಗೆ ಶರಣಾಗಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಡಿವೈಎಸ್ ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth