ಕರಂಬಾರು: 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ - Mahanayaka

ಕರಂಬಾರು: 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ

karambaru
23/06/2025


Provided by

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ಹಿರಿಯ ಪ್ರಾಥಮಿಕ ಶಾಲೆ ಕರಂಬಾರು,  ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿ ಸಂಘ (ರಿ ) ಕರಂಬಾರು ಮತ್ತು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು  ಇವರ ಪ್ರಾಯೋಜಕತ್ವದಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಸಮವಸ್ತ್ರ ವಿತರಣೆ ನಡೆಯಿತು.

ಮಂಗಳೂರಿನ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಜ್ಯೋತಿ ರಾಜ್ ಮಾತನಾಡಿ, ಕರಂಬಾರು ಹಳೆ ವಿದ್ಯಾರ್ಥಿ ಸಂಘದ ಸಾಧನೆ ರಾಜ್ಯಕ್ಕೆ ಮಾದರಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಕೊಡುಗೆಯನ್ನು ನೀಡಿದ್ಧಾರೆ. ಕರಂಬಾರು ಹಳೆ ವಿದ್ಯಾರ್ಥಿ ಸಂಘದ ಜೊತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮತ್ತು ವಿಜಯ ಬ್ಯಾಂಕ್ ಸದಾ ನಿಮ್ಮ ಜೊತೆ ಇದ್ದೇವೆ ಎಂದು ಹೇಳಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ಧರು. ಬ್ಯಾಂಕ್ ಆಫ್ ಬರೋಡ ಬಜಪೆ ಶಾಖೆ ಮ್ಯಾನೇಜರ್ ನಾಗ ವರಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ನಿವೃತ್ತ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ವಿಶ್ವನಾಥ್ ರೈ, ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಮಾಜಿ ಅಧ್ಯಕ್ಷ ಜಿತೇಶ್ ಸಾಲ್ಯಾನ್, SDMC ಗುಣಪಾಲ್ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘ  ಕರಂಬಾರು ಉಪಾಧ್ಯಕ್ಷ ರಾಕೇಶ್ ಕುಂದರ್, ಹಳೆ ವಿದ್ಯಾರ್ಥಿ ಸಂಘ ಕರಂಬಾರು ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, SDMC ಉಪಾಧ್ಯಕ್ಷರಾದ ಲಾವಣ್ಯ, ನೇತ್ರಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.  ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು, ಶಿಕ್ಷಕಿ ಗೀತಾ  ಕಾರ್ಯಕ್ರಮ ನಿರೂಪಿಸಿದರು, ಮಾಲಾಶ್ರೀ ವಂದಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ