12:52 PM Thursday 16 - October 2025

ಫೆ.5ರಿಂದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಆರಂಭ: ಆರ್.ವಿ.ದೇಶಪಾಂಡೆ

congress
04/02/2023

ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕರಾವಳಿ– ಮಲೆನಾಡು ಪ್ರಜಾಧ್ವನಿ ಯಾತ್ರೆಯನ್ನು ಫೆ.5ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಹೇಳಿದರು.

ಉಡುಪಿ‌ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.5ರಂದು ಸುಳ್ಯ ಕ್ಷೇತ್ರದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಬಳಿಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 26 ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿವೆ. ಈ ಯಾತ್ರೆಯ ಪ್ರಯುಕ್ತ ಪ್ರತಿ ಕ್ಷೇತ್ರದಲ್ಲಿ ಸಭೆ, ಮುಖಂಡರೊಂದಿಗೆ ಅಭಿವೃದ್ಧಿ ಬಗ್ಗೆ ಚರ್ಚೆ ಹಾಗೂ ಜನಾಭಿಪ್ರಾಯವನ್ನು ಪಡೆದುಕೊಳ್ಳಲಾಗುವುದು ಎಂದರು.

ಮೊದಲ ಹಂತದಲ್ಲಿ ಫೆ.6ರಂದು ಮೂಡಬಿದ್ರೆ, 7ರಂದು ಕಾಪು, 8ರಂದು ಕುಂದಾಪುರ, 9ರಂದು ಶೃಂಗೇರಿಯಲ್ಲಿ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು

ಕರ್ನಾಟಕ ಮತದಾರರು ಪ್ರಬುದ್ಧರಾಗಿದ್ದಾರೆ. ಅವರಿಗೆ ಯಾರು ಗೆಲ್ಲುತ್ತಾರೆಂದು ಗೊತ್ತಿದೆ. ಎಸ್ ಡಿಪಿಐ ಚುನಾವಣೆಯಲ್ಲಿ ಆರಿಸಿ ಬರುವುದಿಲ್ಲವೆಂದು ಗೊತ್ತಿದೆ. ಹಾಗಾಗಿ ಮತದಾರರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ. ದೇಶಪಾಂಡೆ ಹೇಳಿದರು.

ಹಿಜಾಬ್ ಪರವಾಗಿ ಕಾಂಗ್ರೆಸ್ ಕೇವಲ ಮಾತನಾಡಿಲ್ಲ, ಹೋರಾಟವೂ ಮಾಡಿದೆ. ಅಲ್ಪಸಂಖ್ಯಾತರ ಪರವಾಗಿ ನಿಂತಿದ್ದೇವೆ. ನಾವು ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವ, ಸಂವಿಧಾನದಲ್ಲಿ ವಿಶ್ವಾಸ ಇಡುತ್ತೇವೆ ಎಂದರು.

ಕುದುರೆ ವ್ಯಾಪಾರದ ಕುರಿತ ಪ್ರಶ್ನೆಗೆ ಮಾತನಾಡಿದ ಅವರು, ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಒಮ್ಮೆ ಪಾಠ ಕಲಿಸಿದ್ದಾರೆ. ಒಮ್ಮೆ ಪಾಠ ಕಲಿತ ನಂತರ ಇಮ್ಮುಂದೆ ಯಾವ ರೀತಿ ಎಚ್ಚರಿಕೆಯಿಂದ ಇರಬೇಕೋ ಆ ರೀತಿ ಇರ್ತೇವೆ. ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರತಿ ಅಭ್ಯರ್ಥಿಯ ಹಿನ್ನೆಲೆ ಹಾಗೂ ಪಕ್ಷ ನಿಷ್ಠೆ ನೋಡಿಕೊಂಡು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version