ಶಾಕಿಂಗ್ ನ್ಯೂಸ್: ನೇಣು ಬಿಗಿದು ಪ್ರಖ್ಯಾತ ಸ್ವಾಮೀಜಿ ಆತ್ಮಹತ್ಯೆ
ಹಾಸನ: ಸ್ವಾಮೀಜಿ ಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ವಾಮೀಜಿಯ ಆತ್ಮಹತ್ಯೆ ಇದೀಗ ವ್ಯಾಪಕ ಅನುಮಾನಗಳಿಗೆ ಕಾರಣವಾಗಿದೆ.
ಆಲೂರು ತಾಲೂಕಿನ ಬಾಳೆಹೊನ್ನೂರು ಶಾಖಾ ಮಠ, ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂಗಳವಾರ ರಾತ್ರಿ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಬುಧವಾರ ಸ್ವಾಮೀಜಿಯ ಕೋಣೆಯತ್ತ ವ್ಯಕ್ತಿಯೊಬ್ಬರ ತೆರಳಿದಾಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಘಿದೆ.
ಸ್ವಾಮೀಜಿಯ ಆತ್ಮಹತ್ಯೆಯ ಸುದ್ದಿ ಕೇಳಿ ಭಕ್ತರಿಗೆ ಆಘಾತವಾಗಿದ್ದು, ಸ್ವಾಮೀಜಿಯ ಆತ್ಮಹತ್ಯೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಆಲೂರು ಠಾಣಾ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.