ಶಾಲಾ ಪ್ರವಾಸದ ಬಸ್ ಪಲ್ಟಿ: ಮೂವರು ಶಿಕ್ಷಕಿಯರು,  20 ವಿದ್ಯಾರ್ಥಿಗಳಿಗೆ ಗಾಯ - Mahanayaka
3:37 PM Saturday 24 - January 2026

ಶಾಲಾ ಪ್ರವಾಸದ ಬಸ್ ಪಲ್ಟಿ: ಮೂವರು ಶಿಕ್ಷಕಿಯರು,  20 ವಿದ್ಯಾರ್ಥಿಗಳಿಗೆ ಗಾಯ

karkala bus palti
02/01/2023

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ಬಸ್ ಚಾಲನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಘಟನೆಯಲ್ಲಿ ಮೂವರು ಶಿಕ್ಷಕಿಯರು ಸೇರಿದಂತೆ 20 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ