ಕಾರ್ಕಳ: ಅನೈತಿಕ ಪೊಲೀಸ್‌ಗಿರಿ: ಐವರ ಹಿಂಜಾವೇ ಕಾರ್ಯಕರ್ತರ ಬಂಧನ

ಉಡುಪಿ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯರು, ಸಂದೀಪ್ ಪೂಜಾರಿ ಮಿಯ್ಯರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ. ಜು.29ರಂದು ನಡೆದ ಘಟನೆ ಇದೀಗ ಐದು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಬೆನ್ನಟ್ಟಿಕೊಂಡು ಬಂದು ಹಿಂಜಾವೇ ಕಾರ್ಯಕರ್ತರು, ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆಂದು ದೂರಲಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಆಗಮಿಸಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw