ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ನೋಡುವುದು ಹೇಗೆ?

ಬೆಂಗಳೂರು: ಏಪ್ರಿಲ್ 8(ನಾಳೆ)ರಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ(Karnataka 2nd PUC Exam 2025 Result ) ಪ್ರಕಟವಾಗಲಿದ್ದು, ಮಧ್ಯಾಹ್ನ 12:30ಕ್ಕೆ ಸರಿಯಾಗಿ ಫಲಿತಾಂಶ ಪ್ರಕಟವಾಗಲಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟನೆ ಮಾಡಲಾಗಿದ್ದಾರೆ.
ಮಧ್ಯಾಹ್ನ 1:30ರ ಸುಮಾರಿಗೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಅಧಿಕೃತ ವೆಬ್ ಸೈಟ್ https://karresults.nic.in/ ಅಥವಾ https://kseab.karnataka.gov.in/ ವೆಬ್ ಸೈಟ್ ಗೆ ತೆರಳಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ಪಿಡಿಎಫ್ ಕೂಡ ಡೌನ್ ಲೋಡ್ ಮಾಡಿಕೊಳ್ಳಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: