3:08 PM Wednesday 15 - October 2025

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?

2nd puc result 2021
20/07/2021

ಬೆಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೂ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಮೊದಲ ಬಾರಿಗೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯು ಹಾಗೂ ಆಂತರಿಕ ಅಂಕಗಳನ್ನು ಮೌಲ್ಯಾಂಕನ ಮಾಡಿ ಫಲಿತಾಂಶ ನೀಡಲಾಗಿದೆ. ಈ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲದಿದ್ದರೆ ಆಗಸ್ಟ್ ನಲ್ಲಿ ಪರೀಕ್ಷೆಗಳನ್ನು ಬರೆಯಬಹುದಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಇನ್ನೂ ಒಟ್ಟು 6,66,499ವಿದ್ಯಾರ್ಥಿಗಳು ಪಾಸ್ ಆಗಿದ್ದು, 4,57,706 ವಿದ್ಯಾರ್ಥಿಗಳು ಡಿಸ್ಟಿಂಗ್ ಶನ್ ಹಾಗೂ ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದರೆ, 1,47,055 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದಾರೆ. ಅವರಲ್ಲಿ 1,95,650 ಹುಡುಗರು ಹಾಗೂ 2,52,056 ವಿದ್ಯಾರ್ಥಿನಿಯರು ಮತ್ತು 76,344 ರಿಪಿಟರ್ಸ್ ಇದ್ದಾರೆ ಎಂದು ಅವರು ತಿಳಿಸಿದರು.

ಇನ್ನೂ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ವೆಬ್ ಸೈಟ್ www.pue.kar.nic.in ನಲ್ಲಿ  ನೋಡಬಹುದಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇನ್ನೂ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ವೆಬ್  ಸೈಟ್ ಗೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದೆ. ಇಂದು ರಾತ್ರಿ ಅಥವಾ ರಾತ್ರಿ ವೇಳೆಗೆ ಈ ಸಮಸ್ಯೆ ಸರಿಯಾಗಬಹುದಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೊಳಗಾಗುವುದು ಬೇಡ ಎಂದು ಹೇಳಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ? | ಕ್ಲಿಕ್ ಮಾಡಿ

ಇತ್ತೀಚಿನ ಸುದ್ದಿ

Exit mobile version