ಉಪ ಚುನಾವಣಾ ಫಲಿತಾಂಶ: 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
Karnataka Aassembly by Election results:
ಬೆಂಗಳೂರು: ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಅಂತಿಮವಾಗಿ ರಾಜ್ಯದ ಮತದಾರರು ಎನ್ ಡಿಎ ಮೈತ್ರಿ ಕೂಟವನ್ನು ತಿರಸ್ಕರಿಸಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಚನ್ನಪಟ್ಟಣದಲ್ಲಿ ನಿಖಿಲ್ ಗೆ ಸೋಲು:
ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್ ಎದುರು ಸೋಲನುಭವಿಸಿದ್ದಾರೆ. ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ನಿಖಿಲ್ ಕುಮಾರಸ್ವಾಮಿಗೆ ಇದು ಮೂರನೇಯ ಸೋಲು.
ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸುವ ಮೂಲಕ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹೀನಾಯ ಸೋಲುಣಿಸಿದ್ದಾರೆ.
ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಸೋಲು:
ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯಾಸೀರ್ ಪಠಾಣ್ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು:
ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ– ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.
2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಹೀಗಾಗಿ, ತೆರುವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: