ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬೆಂಗಳೂರು ನಗರ ಪೂರ್ವ ಸಿದ್ಧತೆಗಳ ಪಕ್ಷಿನೋಟ

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 08 ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಗಮವಾಗಿ ಸಾರ್ವಜನಿಕರು ತಮ್ಮ ಮತ ಚಲಾವಣೆ ಮಾಡಲು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮಾರ್ಗಸೂಚಿಗಳ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನಗರದ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕೇಂದ್ರಿಯ ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ಲಾಗ್ ಮಾರ್ಚ್ ಗಳನ್ನು ಕೈಗೊಳ್ಳಲಾಗಿರುತ್ತದೆ. 08 ವಿಭಾಗಗಳ ವ್ಯಾಪ್ತಿಯಲ್ಲಿ 123 ಚೆಕ್ ಪೋಸ್ಟ್ ಗಳನ್ನು ಅಳವಡಿಸಲಾಗಿದೆ. 131 ಪ್ರೈಯಿಂಗ್ ಸ್ಕ್ಯಾಡ್ ಗಳು ಕಾರ್ಯಾಚರಣೆಯಲ್ಲಿರುತ್ತವೆ. ದಿನಾಂಕ 08.05.2023 ರಿಂದ 10.05.2023 ರ ಮದ್ಯರಾತ್ರಿಯವರೆಗೆ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇದಿಸಲಾಗಿದೆ.
ನಗರ ವ್ಯಾಪ್ತಿಯಲ್ಲಿ ಬರುವ ರೌಡಿ ಪಟ್ಟಿ ಆಸಾಮಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರನ್ನು ಗುರ್ತಿಸಿ 7493 ಜನರಿಂದ ಭದ್ರತಾ ಕಾಯಿದೆ ಅಡಿಯಲ್ಲಿ ಶಾಂತಿಭಂಗವುಂಟು ಮಾಡದಂತೆ ಮುಚ್ಚಳಿಕೆ ಪಡೆಯಲಾಗಿದೆ. 28 ಜನರನ್ನು ಗೂಂಡಾ ಕಾಯಿದೆ ಅಡಿಯಲ್ಲಿ ಬಂಧನದಲ್ಲಿಡಲಾಗಿದೆ. ನಗರದ 460 ಕಡೆಗಳಲ್ಲಿ ಸಶಸ್ತ್ರ ತುಕಡಿಗಳೊಂದಿಗೆ (Police Flag March) ಪೊಲೀಸ್ ಪಥ ಸಂಚಲನ ನಡೆಸಲಾಗಿದೆ. 7761 ಪರವಾನಿಗೆ ಪಡೆದ ಶಸ್ತ್ರಾಸ್ತ್ರ (Fire Arms) ಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಜಮಾ ಮಾಡಲಾಗಿದೆ. ವಾರಂಟ್ ಜಾರಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡು 4819 ವಾರಂಟ್ ಗಳನ್ನು ಜಾರಿಗೊಳಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಘಟಕವು ರೂ. 10,93,97,005/- ನಗದು ಹಣ, 28.5 ಕೆಜಿಯಷ್ಟು ಬಂಗಾರದ ವಡವೆಗಳು, 140 ಕೆ ಜಿ ಬೆಳ್ಳಿಯ ಆಭರಣ ಹಾಗೂ ರೂ:9,72,87,071/- ಮೌಲ್ಯದ ಉಚಿತ ಉಡುಗೊರೆಗಳು ಹಾಗೂ 29,51,54,780/- ಮೌಲ್ಯದ ಡ್ರಗ್ಸ್ ಸೇರಿದಂತೆ ಒಟ್ಟು 64 (ಅರವತ್ನಾಲ್ಕು ಕೋಟಿ) ಮೌಲ್ಯದ ವಸ್ತುಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.ಸಾರ್ವಜನಿಕರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw