12:19 PM Tuesday 20 - January 2026

ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ | ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?

bommai samputa
04/08/2021

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋದಿಸಿದರು.

ರಾಜ್ಯದಲ್ಲಿ ಒಟ್ಟು  29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯುಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದು, ನೂತನ ಸಚಿವರಿಗೆ ಶುಭ ಹಾರೈಸಿದ್ದಾರೆ.

ಮೊದಲನೆಯದಾಗಿ ಹಿರಿಯ ಬಿಜೆಪಿ ನಾಯಕ ಗೋವಿಂದ ಕಾರಜೋಳ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಎರಡನೆಯದಾಗಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಆರ್.ಅಶೋಕ್,  ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್.ಅಂಗಾರ, ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ್ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ನಿರಾಣಿ, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಭೈರತಿ ಬಸವರಾಜು, ಡಾ.ಕೆ.ಸುಧಾಕರ್, ಕೆ.ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ಕೆ.ಸಿ.ನಾರಾಯಣ ಗೌಡ, ಬಿ.ಸಿ.ನಾಗೇಶ್, ವಿ.ಸುನೀಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಮುನಿರತ್ನ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ಸುದ್ದಿಗಳು…

ಯೋ ಯೋ ಹನಿ ಸಿಂಗ್ ವಿರುದ್ಧ ಪತ್ನಿಯಿಂದ ದೂರು: ನಟಿಯರೊಂದಿಗೆ ಅಕ್ರಮ ಸಂಬಂಧ, ಮಾದಕ ವ್ಯಸನದ ಆರೋಪ

ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!

ಚಟ್ನಿ ರುಚಿಕರವಾಗಿ ತಯಾರಿಸಿಲ್ಲ ಎಂದು ಪತ್ನಿಯನ್ನು ಹೊಡೆದುಕೊಂದ ಪತಿ!

ನನ್ನ ಸ್ನೇಹಿತರ ಲೈಂಗಿಕ ಬಯಕೆ ತೀರಿಸು ಎಂದು ಪ್ರಿಯಕರನಿಂದಲೇ ಬ್ಲ್ಯಾಕ್ ಮೇಲ್ | 40 ಅಡಿ ಎತ್ತರದಿಂದ ನದಿಗೆ ಹಾರಿದ ಯುವತಿ!

ಕೇರಳ-ಪುತ್ತೂರು ಅಧಿಕೃತ ರಸ್ತೆ ಹೊರತು ಪಡಿಸಿ ಉಳಿದ ರಸ್ತೆಗೆ ಮಣ್ಣು ಹಾಕಿ ಮುಚ್ಚಲು ಶಾಸಕರಿಂದ ಸೂಚನೆ

ಇತ್ತೀಚಿನ ಸುದ್ದಿ

Exit mobile version