11:42 PM Thursday 16 - October 2025

90 ಎಲೆಕ್ಟ್ರಿಕ್ ಬಸ್ ​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ: ಈ ಬಸ್ಸಿನ ವಿಶೇಷತೆ ಏನು?

electric bus
27/12/2021

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 90 ಮಿನಿ ಎಲೆಕ್ಟ್ರಿಕ್ ಬಸ್​​ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಂದೆ ಚಾಲನೆ ನೀಡಿದರು.

ದೇಶದಲ್ಲೇ ಮೊದಲ ಬಿಎಸ್‌6 ಇಂಜಿನ್ ಡೀಸೆಲ್ ಬಸ್​ಗಳಿಗೂ ಚಾಲನೆ ಸಿಕ್ಕಿದ್ದು, ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಶ್ರೀರಾಮುಲು ಬಸ್​​ನಲ್ಲಿ ಪ್ರಯಾಣ ಮಾಡುವ ಮೂಲಕ ಚಾಲನೆ ನೀಡಿದರು. ಬಿಎಸ್ 6 ಡೀಸೆಲ್ ಬಸ್‌ಗಳನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪರಿಚಯ ಮಾಡಲಾಗಿದೆ. ಪರಿಸರ ಮಾಲಿನ್ಯ ಕಡಿಮೆ ಇರುವ, ಅತಿ ಕಡಿಮೆ‌ ಹೊಗೆ ಹೊರಸೂಸುವ ಬಸ್​ಗಳಾಗಿವೆ. ಈ ಬಸ್​​ನಲ್ಲಿ 33 ಆಸನಗಳ ವ್ಯವಸ್ಥೆ ಇದೆ.

ಈ ಹಿಂದೆ ಸರ್ಕಾರ ಬಜೆಟ್ ನಲ್ಲಿ ನೀಡಿದ್ದ ಅನುದಾನದಲ್ಲಿ 535 ಬಿಎಸ್‌6 ಡೀಸೆಲ್ ಬಸ್ ಖರೀದಿ ಮಾಡಲಾಗಿದೆ. ಈಗಾಗಲೇ 40 ಎಲೆಕ್ಟ್ರಿಕ್, 150 ಬಿಎಸ್‌6 ಡೀಸೆಲ್ ಬಸ್‌ಗಳು ಬಿಎಂಟಿಸಿ ಸಂಸ್ಥೆ ಸೇರಿವೆ. ಫೆಬ್ರವರಿ ವೇಳೆಗೆ ಉಳಿದ ಎಲ್ಲಾ ಹೊಸ ಬಸ್‌ಗಳು ತನ್ನ ಸಂಚಾರ ಆರಂಭಿಸಲಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಾತ್ಮ ಗಾಂಧಿಯವರ ಚಿಂತನೆ ಹಿಡಿದಿಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕ

ಮತಾಂತರದ ಬಗ್ಗೆ ಶೌರ್ಯದ ಮಾತಿನ ಬಳಿಕ ಹೇಳಿಕೆ ವಾಪಸ್ ಪಡೆದ ತೇಜಸ್ವಿ ಸೂರ್ಯ

ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ

ಇತ್ತೀಚಿನ ಸುದ್ದಿ

Exit mobile version