ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧವಾದ ಕಾಂಗ್ರೆಸ್: ದಿನಾಂಕ ಪ್ರಕಟ - Mahanayaka

ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧವಾದ ಕಾಂಗ್ರೆಸ್: ದಿನಾಂಕ ಪ್ರಕಟ

congress
16/03/2023


Provided by

ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಮಾ.20ರಂದು ಮೊದಲ ಪಟ್ಟಿಯನ್ನು ಪಕ್ಷದ ವರಿಷ್ಠರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲ ಕ್ಷೇತ್ರಗಳಲ್ಲಿ 3 ರಿಂದ 4 ಜನ ಆಕಾಂಕ್ಷಿ ಅಭ್ಯರ್ಥಿಗಳು ಸ್ಪರ್ಧಿಸಲು ಅರ್ಜಿ ಹಾಕಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಪಕ್ಷದ ಹೈಕಮಾಂಡ್ ಕಳುಹಿಸಿಕೊಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ಮೂರು ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಿದ್ದಾರೆ ಎಂದರು.

ಬೆಳಗಾವಿ ನಗರದ ಸಿಪಿಇಡಿ ಮೈದಾನದಲ್ಲಿ ಮಾ.20ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಬೃಹತ್ ಯುವ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಮಾ.16ರಂದು ಹತ್ತು ಜಿಲ್ಲೆಗಳಿಂದ ಪಕ್ಷದ ಮುಖಂಡರು, ಹಾಲಿ, ಮಾಜಿ ಶಾಸಕರು, ಸಂಸದರು ಆಗಮಿಸುತ್ತಿದ್ದಾರೆ. ಅಲ್ಲದೆ, ಯುವ ಸಮಾವೇಶ, ರೋಡ್ ಷೋ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅಂತಿಮಗೊಳಿಸಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಭಾರತ್ ಜೋಡ ಮತ್ತು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವುಗಳ ಕುರಿತು ಸ್ವತಃ ರಾಹುಲ ಗಾಂಧಿ ಅವರು ಯುವಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೊಳಿಸುವ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು. ದೇಶ ಮತ್ತು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಪದವಿ ವಿದ್ಯಾವಂತ ಯುವಕರಿಗೆ ಉದ್ಯೋಗಗಳು ಸಿಗುತ್ತಿಲ್ಲ. ಬಿಜೆಪಿ ಸರ್ಕಾರಗಳು ಉದ್ಯೋಗ ಸೃಷ್ಟಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಕೂಡಲೇ ಪಕ್ಷದ ವರಿಷ್ಠರು ಜನಪ್ರಿಯ ಯೋಜನೆಗಳ ಜತೆಗೆ ಉದ್ಯೋಗ ನೀಡುವ ಕುರಿತು ಯೋಜನೆ ಘೋಷಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ