ಅಬ್ದುಲ್ ರೆಹಮಾನ್ ಮನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿಯೋಗ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ - Mahanayaka

ಅಬ್ದುಲ್ ರೆಹಮಾನ್ ಮನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿಯೋಗ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

abdul rehman
08/06/2025


Provided by

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ಬಡಗ ಬೆಳ್ಳೂರಿನ ಯುವಕ ಅಬ್ದುಲ್ ರೆಹಮಾನ್ ಇವರ ಮನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.

ಇದೇ ವೇಳೆ ಹತ್ಯೆ ನಡೆದ ಬಗ್ಗೆ ಹಾಗೂ ನಂತರದ ಪರಿಸ್ಥಿತಿಗಳ ಬಗ್ಗೆ ಮನೆಯವರೊಂದಿಗೆ ಸಮಾಲೋಚನೆ ನಡೆಸಿ,ತಮ್ಮ ನೋವಿನಲ್ಲಿ ಭಾಗಿಯಾಗುವುದರ ಜೊತೆಗೆ ಅಮಾಯಕ ಅಬ್ದುಲ್ ರೆಹಮಾನ್ ಕೊಲೆ ಆರೋಪದಲ್ಲಿ ನೇರವಾಗಿ ಭಾಗಿಯಾದ ಹಾಗೂ ಸೂತ್ರಧಾರರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಸಂತ್ರಸ್ತ ರೆಹಮಾನ್ ಮನೆಯವರಿಗೆ ಗರಿಷ್ಠ ಪ್ರಮಾಣದಲ್ಲಿ ಆರ್ಥಿಕ ಪರಿಹಾರ ನೀಡುವಂತೆ ಸರಕಾರ ಹಾಗೂ ಪೊಲೀಸು ಇಲಾಖೆಗೆ ಒತ್ತಾಯಿಸುವುದಾಗಿ ತಿಳಿಸಲಾಯಿತು.

ಅಲ್ಲದೆ  ಮುಂದಿನ ಎಲ್ಲಾ ಕಾನೂನು ಹೋರಾಟಗಳಲ್ಲೂ ಸಂಘಟನೆಯು ತಮ್ಮ ಜೊತೆ ನಿಲ್ಲುವ ಭರವಸೆಯನ್ನು ನೀಡಿ ಮನೆಯವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು.

ನಿಯೋಗದಲ್ಲಿ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ದಲಿತ ಕಲಾ ಮಂಡಳಿ ಸಂಚಾಲಕರಾದ ಕಮಲಾಕ್ಷ ಬಜಾಲ್, ಜಿಲ್ಲಾ ಸಂಘಟನಾ ಸಂಚಾಲಕರಾದ ರಘು. ಕೆ. ಎಕ್ಕಾರು, ಕೃಷ್ಣಾನಂದ ಡಿ., ಸಂಕಪ್ಪ ಕಾಂಚನ್, ಮಂಗಳೂರು ತಾಲೂಕು ಸಂಘಟನಾ ಸಂಚಾಲಕರಾದ ರುಕ್ಕಯ್ಯ ಕರಂಬಾರು, ಕೃಷ್ಣ ಕೆ. ಎಕ್ಕಾರು, ಎಕ್ಕಾರು ಗ್ರಾಮ ಸಂಚಾಲಕರಾದ ಗಣೇಶ್ ಕೆಂಚಗುಡ್ಡೆ, ಮಹಿಳಾ ಸಂಚಾಲಕಿ ಸೌಮ್ಯ ಸುರೇಶ್, ಸಂಘಟನಾ ಸಂಚಾಲಕರಾದ ವಾಸು ತೆಂಕ ಎಕ್ಕಾರು, ಸುರೇಶ್ ಸೌಮ್ಯ, ಮಂಜುನಾಥ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ