ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ - Mahanayaka

ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್–ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

high court
26/04/2026

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಕರ್ನಾಟಕ ಉಚ್ಚ ನ್ಯಾಯಾಲಯವು ಖಾಲಿ ಇರುವ 101 ಗ್ರೂಪ್–ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ:

ಪಿಯೂನ್/ ವಾಚ್‌ಮನ್/ ಸ್ವೀಪರ್: 90ಕ್ಕೂ ಹೆಚ್ಚು ಹುದ್ದೆಗಳು

ಲಿಫ್ಟ್ ಅಟೆಂಡರ್: 05 ಹುದ್ದೆಗಳು

ಅಸಿಸ್ಟಂಟ್ ಬೈಂಡರ್: 01 ಹುದ್ದೆ

ಟೈಲರ್: 01 ಹುದ್ದೆ

ಧೋಬಿ: 01 ಹುದ್ದೆ

(ಇವುಗಳಲ್ಲಿ 93 ಹುದ್ದೆಗಳು ಉಳಿದ ಮೂಲ ವೃಂದ (RPC) ಮತ್ತು 8 ಹುದ್ದೆಗಳು ಕಲ್ಯಾಣ ಕರ್ನಾಟಕ (KKR) ಭಾಗಕ್ಕೆ ಸೇರಿವೆ.)

ವಿದ್ಯಾರ್ಹತೆ ಮತ್ತು ವಯೋಮಿತಿ:

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಹಿಂದುಳಿದ ವರ್ಗದವರಿಗೆ (2A/2B/3A/3B) 38 ವರ್ಷ ಹಾಗೂ SC/ST ಮತ್ತು ವರ್ಗ–1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ರಿಂದ ರೂ. 63,200 ವರೆಗೆ ವೇತನ ಇರಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: ರೂ. 200

SC/ST/ವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 100

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 22 ಏಪ್ರಿಲ್ 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಮೇ 2026

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21 ಮೇ 2026

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ ಸೈಟ್ https://judiciary.karnataka.gov.in  ಗೆ ಭೇಟಿ ನೀಡಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ