ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ 35,000ರೂ. ವರೆಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸುವುದು ಹೇಗೆ? - Mahanayaka

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ 35,000ರೂ. ವರೆಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸುವುದು ಹೇಗೆ?

prize money scholarship
05/11/2024

Karnataka Prize Money Scholarship 2024 — ಕರ್ನಾಟಕ ಸರ್ಕಾರದ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಪ್ರೈಜ್ ಮನಿ ಸ್ಕಾಲರ್ಶಿಪ್ ಯೋಜನೆಯ ಅಡಿಯಲ್ಲಿ 35 ಸಾವಿರ ರೂ. ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ಯಾವ ವಿದ್ಯಾರ್ಥಿಗಳಿಗೆ ಎಷ್ಟು ರೂ. ವಿದ್ಯಾರ್ಥಿ ವೇತನ?

ಪ್ರೋತ್ಸಾಹ ಧನ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿವಿಧ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ವಿದ್ಯಾರ್ಥಿ ವೇತನವನ್ನು ಹಂಚಲಾಗಿದೆ.

*   ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ — 20,000ರೂ.

*   ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ — 25,000ರೂ.

*   ಯಾವುದೇ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ — 30,000ರೂ.

*   ವೃತ್ತಿಪರ ಪದವಿ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ — 35,000ರೂ.

 ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹತೆಗಳು:

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬವಾರ್ಷಿಕ ಆದಾಯವು 2.5 ಲಕ್ಷ ರೂ. ಒಳಗಿರಬೇಕು. ಈ ವಿದ್ಯಾರ್ಥಿ ವೇತನ ಕೇವಲ ಪರಿಶಿಷ್ಟ ಜಾತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ.

 ಅರ್ಜಿ ಹೇಗೆ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮಟ್ಟದ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ