ಕರ್ನಾಟಕ ಮಳೆ ಮುನ್ಸೂಚನೆ: ಮುಂದಿನ 7 ದಿನ ರಾಜ್ಯಾದ್ಯಂತ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!
25/07/2026
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ (ಜುಲೈ 25 ರಿಂದ ಜುಲೈ 31 ರವರೆಗೆ) ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕ (Coastal Karnataka):
- ಜುಲೈ 25 – ಜುಲೈ 28: ಕರಾವಳಿಯ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹಳದಿ ಎಚ್ಚರಿಕೆ (Yellow Warning) ನೀಡಲಾಗಿದೆ.
- ಜುಲೈ 29: ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ಇಲ್ಲ (ಸಾಧಾರಣ ಮಳೆ).
- ಜುಲೈ 30 – ಜುಲೈ 31: ಮತ್ತೆ ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ.
ಉತ್ತರ ಒಳನಾಡು (North Interior Karnataka):
- ಜುಲೈ 25 – ಜುಲೈ 26: ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ವೇಗವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
- ಜುಲೈ 27 – ಜುಲೈ 31: ಜುಲೈ 27 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು (South Interior Karnataka):
- ಜುಲೈ 25: ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
- ಜುಲೈ 26 – ಜುಲೈ 27: ಗುಡುಗು, ಸಿಡಿಲಿನೊಂದಿಗೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ.
- ಜುಲೈ 28 – ಜುಲೈ 31: ಜುಲೈ 28 ರಿಂದ ಮಳೆ ತೀವ್ರಗೊಳ್ಳಲಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ವರದಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























