ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

rain
31/08/2025

ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮಳೆ ವಿವರ ತಿಳಿಯೋಣ..

ಬೆಂಗಳೂರು ನಗರ:

ಮುಂದಿನ ಐದು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ: ಮುಂದಿನ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಉಭಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆ:  ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಲವಡೆ ವ್ಯಾಪಕ ಮತ್ತು ಇನ್ನು ಕೆಲವೆಡೆ ಸಾಧಾರಣಯಾಗುವ ನಿರೀಕ್ಷೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version