12:52 AM Friday 12 - September 2025

ರಾಜ್ಯದಲ್ಲಿ ಮತ್ತೆ ಮಳೆ ಜೋರಾಗುತ್ತಾ? | ಹವಾಮಾನ ವರದಿ ಹೀಗಿದೆ..!

rain
12/09/2025

ಬೆಂಗಳೂರು:  ಕಳೆದ ಹಲವು ದಿನಗಳಿಂದ  ಮಳೆಯ ಪ್ರಮಾಣ ತಗ್ಗಿದೆ. ಇದೇ ಸಂದರ್ಭದಲ್ಲಿ ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದೆ. ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಲೆಮಹದೇಶ್ವರ ಬೆಟ್ಟ​, ಟಿ.ಜಿ.ಹಳ್ಳಿ, ಕೋಲಾರ, ಗಂಗಾವತಿ, ಆಳಂದ, ಸೇಡಂ, ಹುಣಸಗಿ, ಅಫ್ಜಲ್​ಪುರ, ವಿಜಯಪುರ, ತಾವರಗೇರಾ, ಸಿಂಧನೂರು, ರಾಯಚೂರು, ಮುನಿರಾಬಾದ್, ಮಾನ್ವಿ, ಕಲಬುರಗಿ, ಲಿಂಗಸುಗೂರು, ಕುರ್ಡಿ, ಕೆಂಭಾವಿ, ಇಂಡಿ, ದೇವರಹಿಪ್ಪರಗಿ, ಶೋರಾಪುರ, ನಾಗಮಂಗಲ, ಮಾಗಡಿ, ಕೃಷ್ಣರಾಜಸಾಗರ, ಕೆ.ಆರ್.ನಗರ, ಇಳಕಲ್, ಚಿಂಚೋಳಿ, ಚಿಕ್ಕಬಳ್ಳಾಪುರ, ಭಾಲ್ಕಿ ಹಾಗೂ ಬಸವನಬಾಗೇವಾಡಿಯಲ್ಲಿ ಗುರುವಾರ ಹೆಚ್ಚಿನ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ದೇಶದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಮುನ್ಸೂಚನೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version