ಡಿಸೆಂಬರ್ ನಲ್ಲಿ ಶಾಲೆ ತೆರೆಯಲಿದೆಯೇ? | ತಜ್ಞರ ಸಮಿತಿ ಏನು ಹೇಳಿದೆ? - Mahanayaka

ಡಿಸೆಂಬರ್ ನಲ್ಲಿ ಶಾಲೆ ತೆರೆಯಲಿದೆಯೇ? | ತಜ್ಞರ ಸಮಿತಿ ಏನು ಹೇಳಿದೆ?

23/11/2020

ಬೆಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ರಾಜ್ಯದಲ್ಲಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ  ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.


Provided by

ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್‌ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರಿಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ.

ಡಿಸೆಂಬರ್‌ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.


Provided by

 

script async src=”https://pagead2.googlesyndication.com/pagead/js/adsbygoogle.js”>

ಇತ್ತೀಚಿನ ಸುದ್ದಿ