ಜನವರಿ 1ರಿಂದ ಶಾಲಾ ಕಾಲೇಜು ಆರಂಭ ಆಗಲಿದೆಯೇ ಇಲ್ಲವೇ? | ಇಲ್ಲಿದೆ ಮಾಹಿತಿ
30/12/2020
ಬೆಂಗಳೂರು: ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಜನವರಿ 1ರಿಂದ ಶಾಲಾ ಕಾಲೇಜು ಆರಂಭವಾಗಲಿದೆಯೇ ಇಲ್ಲವೇ ಎಂದು ಪೋಷಕರು, ವಿದ್ಯಾರ್ಥಿಗಳು ಗೊಂದಲದಲ್ಲಿರುವಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನಿಗದಿಯಂತೆ ಜನವರಿ 1ರಿಂದಲೇ ಶಾಲಾ ಕಾಲೇಜುಗಳು ಆರಂಭವಾಗಲಿದೆ. ಕೊರೊನಾ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಒತ್ತಾಯ ಕೂಡ ಮಾಡುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನೂ ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದು ಸಚಿವರು ಹೇಳಿದ್ದಾರೆ. ಕೊರೊನಾ ಹಾವಳಿಯಿಂದ 9 ತಿಂಗಳುಗಳಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ಭಯಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಸುಧಾಕರ್ ತಿಳಿಸಿದರು.




 
 






















