ಕೋವಿಡ್ ಹೊಡೆತದಿಂದ ಚೇತರಿಕೆ- ಕೆಎಸ್ ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ - Mahanayaka

ಕೋವಿಡ್ ಹೊಡೆತದಿಂದ ಚೇತರಿಕೆ- ಕೆಎಸ್ ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ

ksic
03/03/2023

ಬೆಂಗಳೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್‌ ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ‌.

ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ್ಷದಲ್ಲಿ 204.77 ಕೋಟಿ ವಹಿವಾಟು ನಡೆಸಿದ್ದು, 31.64 ಕೋಟಿ ಲಾಭಗಳಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ 153.59 ಕೋಟಿ ವಹಿವಾಟು ನಡೆಸಿ 27.72 ಕೋಟಿ ಲಾಭ ಗಳಿಸಿತ್ತು.

ಮೈಸೂರು ರೇಷ್ಮೆ ಸೀರೆಗೆ ತನ್ನದೇ ಬ್ರಾಂಡ್ ಇದೆ. ಮೈಸೂರು ಸಿಲ್ಕ್‌ಗೆ ದೇಶವಿದೇಶಗಳಲ್ಲಿ ಬೇಡಿಕೆ ಇದೆ. ಕೆಎಸ್‌ಐಸಿಯಲ್ಲಿ ಹೊಸತನ, ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಪ್ರತಿವರ್ಷ ಆದಾಯದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಕ್ಕಿಂತ  ಈ ಬಾರಿ 50 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ. ನಿಗಮದಲ್ಲಿ  ಮತ್ತಷ್ಟು ಸುಧಾರಿತ ಕ್ರಮಗಳು ಕೈಗೊಳ್ಳುವುದು ಹಾಗೂ ಬೇಡಿಕೆ ಆಧರಿತ ಡಿಸೈನ್‌ಗಳ ಸೀರೆ ಉತ್ಪಾದನೆಯ ಗುರಿ ಹೊಂದಲಾಗಿದೆ. ಈ ಮೂಲಕ ಕೆಎಸ್‌ಐಸಿಯನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಲು ಉದ್ದೇಶಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಇ-ತೂಕ, ಇ ಪೇಮೆಂಟ್ ಜಾರಿ ಮಾಡಲಾಗಿದೆ. ಕಚ್ಛಾ ರೇಷ್ಮೆ ಹಾಗೂ ರೇಷ್ಮೆ ನೂಲಿನ ಬೆಲೆಯಲ್ಲಿ ಸ್ಥಿರತೆ ಕಾಪಾಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ‌. ರೇಷ್ಮೆ ಸೀರೆ ಉತ್ಪಾದನೆಯಲ್ಲೂ ಹೊಸ ವಿನ್ಯಾಸ ಅಳವಡಿಸಿಕೊಳ್ಳಲು ಸೂಚಿಸಲಾಗಿದ್ದು, ಮಾರಾಟ ಹೆಚ್ಚಿಸಲು ಕಪಲ್ ಪ್ಯಾಕೇಜ್ ಸೇರಿದಂತೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ನಿರ್ಧರಿಸಲಾಗಿದೆ‌. ಈ ಮೂಲಕ ರೇಷ್ಮೆ ಇಲಾಖೆ ಹಾಗೂ ಕೆಎಸ್‌ಐಸಿ ನಿಗಮವನ್ನು ಇನ್ನಷ್ಟು ಪ್ರಗತಿಯತ್ತ ಕೊಂಡಯ್ಯಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ