11:45 PM Tuesday 17 - February 2026

ಕರ್ನಾಟಕ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಇಲ್ಲಿದೆ ಸಂಪೂರ್ಣ ವಿವರ

exam time table
17/02/2026

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

  • ದ್ವಿತೀಯ ಪಿಯುಸಿ ಪರೀಕ್ಷೆ: ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದೆ.
  • ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದೆ.

ವಿದ್ಯಾರ್ಥಿಗಳ ಸಂಖ್ಯೆ: ಒಟ್ಟು 9,02,889 (ಎಸ್ಸೆಸ್ಸೆಲ್ಸಿ) ಮತ್ತು 7,10,363 (ಪಿಯುಸಿ) ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

  • ಪರೀಕ್ಷಾ ಸಮಯ: ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:15 ರವರೆಗೆ.
  • ಉಚಿತ ಬಸ್ ಪ್ರಯಾಣ: ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
  • ವೆಬ್ ಕಾಸ್ಟಿಂಗ್: ಅಕ್ರಮ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಇರಲಿದೆ.  ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಹಬ್ಬಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಪರೀಕ್ಷಾ ಭಯ ಹೋಗಲಾಡಿಸಲು ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ.

SSLC ಪರೀಕ್ಷೆ ವೇಳಾಪಟ್ಟಿ

  • ಮಾ.18: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್​, ಸಂಸ್ಕೃತ
  • ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  • ಮಾ.25: ದ್ವೀತಿಯ ಭಾಷೆ (ಇಂಗ್ಲಿಷ್​ , ಕನ್ನಡ)
  • ಮಾ.28: ಗಣಿತ, ಸಮಾಜಶಾಸ್ತ್ರ
  • ಮಾ.30: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್​ , ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ) ಹಾಗೂ ಎನ್ಎಸ್​ಕ್ಯೂಎಫ್ ವಿಷಯಗಳು
  • ಏ.1: ಜಿಟಿಎಸ್ ವಿಷಯಗಳು (ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ
  • ಏ.2: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

  • ಫೆ.28: ಕನ್ನಡ, ಅರೇಬಿಕ್
  • ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
  • ಮಾ.3: ಇಂಗ್ಲಿಷ್​
  • ಮಾ.4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾ.5: ಇತಿಹಾಸ
  • ಮಾ.6: ಭೌತಶಾಸ್ತ್ರ
  • ಮಾ.7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ ಭೂಗರ್ಭಶಾಸ್ತ್ರ
  • ಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ,
  • ಮಾ.10: ಅರ್ಥಶಾಸ್ತ್ರ
  • ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹವಿಜ್ಞಾನ
  • ಮಾ.12: ಹಿಂದಿ
  • ಮಾ.13: ರಾಜ್ಯಶಾಸ್ತ್ರ
  • ಮಾ.14: ಲೆಕ್ಕಶಾಸ್ತ್ರ, ಗಣಿತ
  • ಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
  • ಮಾ.17: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟಿಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆ್ಯಂಡ್​​ ವೆಲ್​ನೆಸ್

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version