1:20 PM Wednesday 27 - August 2025

ಇಂದಿನಿಂದ ಹೆಚ್ಚಾಗಲಿದೆ ಮಳೆ: ಸೆಪ್ಟಂಬರ್ 1ರವರೆಗೆ ಮಳೆಯಾಗುವ ಸಾಧ್ಯತೆ

haevy rain
27/08/2025

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ. ಸೆಪ್ಟಂಬರ್ 1ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆ.30ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆಗಸ್ಟ್​ 29ರವರೆಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.27 ಭಾರೀ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್​ 28 ರವರೆಗೆ ಗಾಳಿಯ ವೇಗವು ಪ್ರತಿ ಗಂಟೆಗೆ 30–40 ಕಿಮೀ ಇರಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್​ 29ರವರೆಗೆ ಗಾಳಿಯ ವೇಗವು ಗಂಟೆಗೆ 30–40 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್​ 28 ರಿಂದ ಆಗಸ್ಟ್​ 30ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version