ತನ್ನ ಮಗು ಸಾವಿನ ಜೊತೆ ಹೋರಾಡುತ್ತಿದ್ದರೂ, ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ಆಂಬುಲೆನ್ಸ್ ಚಾಲಕ - Mahanayaka

ತನ್ನ ಮಗು ಸಾವಿನ ಜೊತೆ ಹೋರಾಡುತ್ತಿದ್ದರೂ, ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ಆಂಬುಲೆನ್ಸ್ ಚಾಲಕ

ambulance driver
15/06/2021


Provided by

ಮೈಸೂರು: ತನ್ನ ಮಗುವಿನ ಮೈಮೇಲೆ ಬಿಸಿನೀರು ಬಿದ್ದು, ಮಗು ಗಂಭೀರವಾಗಿದ್ದರೂ, ತನ್ನ ಆಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವ ಮೂಲಕ ಆಂಬುಲೆನ್ಸ್ ಚಾಲಕ 25 ವರ್ಷ ವಯಸ್ಸಿನ ಗೌಸಿಯಾ ನಗರ ನಿವಾಸಿ ಮುಬಾರಕ್ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಮೊದಲು ಟೆಂಪೊ ಟ್ರಾವಲರ್‌ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮುಬಾರಕ್,  ಲಾಕ್‌ಡೌನ್‌ ನಂತರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಆಂಬುಲೆನ್ಸ್‌ ಚಾಲಕರಾಗಿ ಸೇವೆ ಸಲ್ಲಿಸತೊಡಗಿದ್ದರು. ಜೂನ್ 11ರಂದು ಇವರ ಮಗು ಸೈಯದ್ ಇಬ್ರಾಹಿಂ (2) ಆಟವಾಡುತ್ತಿರುವಾಗ ಸ್ನಾನಕ್ಕಾಗಿ ಆಗ ತಾನೆ ಹಂಡೆಯಿಂದ ಬಕೆಟ್‌ ಗೆ ತೆಗೆದಿರಿಸಿದ್ದ ಬಿಸಿ ನೀರನ್ನು ತನ್ನ ಮೇಲೆ ಚೆಲ್ಲಿಕೊಂಡು ಗಂಭೀರವಾಗಿ ಗಾಯಗೊಂಡಿತು. ಕೂಡಲೇ ಮಗುವನ್ನು ಇವರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದರು.

‘ಜೀವನ್ಮರಣದ ನಡುವೆ ಮಗು ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೂ ಕರೆ ಬಂದ ತಕ್ಷಣ ಇಲ್ಲಿನ ಸಿಗ್ಮಾ ಆಸ್ಪತ್ರೆಯಲ್ಲಿದ್ದ ರೋಗಿಯೊಬ್ಬರನ್ನು ಚಾಮರಾಜನಗರಕ್ಕೆ ತನ್ನ ಆಂಬುಲೆನ್ಸ್‌ನಲ್ಲಿ ಸೋಮವಾರ ರಾತ್ರಿ 9:30ಕ್ಕೆ ಕರೆದುಕೊಂಡು ಹೋಗುವ ಮೂಲಕ ಮುಬಾರಕ್ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.  ಇವರು ಮಂಗಳವಾರ ನಸುಕಿನ ಹೊತ್ತಿಗೆ ವಾಪಸ್ ಬರುವಷ್ಟರಲ್ಲಿ ಇವರ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತ್ತು.

ಇತ್ತೀಚಿನ ಸುದ್ದಿ