ಜೈಲಿನಲ್ಲಿ ಮಾದಕ ದೃವ್ಯಕ್ಕೆ ಕಡಿವಾಣ ಹಾಕಿದ್ದಕ್ಕೆ ಕಾರಾಗೃಹ ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ!
ಕಾರವಾರ: ಕಾರಾಗೃಹದಲ್ಲಿ ಮಾದಕ ದ್ರವ್ಯಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ ಕಾರವಾರದ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.
ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ನಂತರ ಜೈಲರ್ ಕಲ್ಲಪ್ಪ ಗಸ್ತಿ, ಇತರ ಮೂವರು ಸಿಬ್ಬಂದಿ ಮೇಲೆ ಹಲ್ಲೆಗೈದಿದ್ದಾರೆ ಎನ್ನಲಾಗಿದೆ.
ಕಾರಾಗೃಹದಲ್ಲಿ ಕದ್ದುಮುಚ್ಚಿ ಮಾದಕ ದ್ರವ್ಯಗಳನ್ನು ಕೈದಿಗಳು ಪಡೆದುಕೊಳ್ಳುತ್ತಿದ್ದರೆನ್ನಲಾಗಿದೆ. ಕೆಲ ದಿನಗಳಿಂದ ಇದಕ್ಕೆ ಕಡಿವಾಣ ಬಿದ್ದ ಕಾರಣ ಜೈಲಿನೊಳಗೆ ಚಡಪಡಿಸಿದ್ದು, ನಂತರ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























