ಕೊಲೆ ಆರೋಪಿಗೆ ಒಲಿದ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ!
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಕೊಲೆ ಪ್ರಕರಣದ ಆರೋಪಿಯನ್ನ ಆಯ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ‘ಕೈ’ ಶಾಸಕ ರಮೇಶ್ ಬಂಡಿಸಿದ್ದೇಗೌಡ ಒತ್ತಡಕ್ಕೆ ಮಣಿದು ಈ ಆಯ್ಕೆ ಮಾಡಲಾಗಿದೆ ಅಂತ ತಿಳಿದು ಬಂದಿದೆ.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡಿಸೆಂಬರ್ ನಲ್ಲಿ ನಡೆಯುವ ನುಡಿಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ ಈ ನಡುವೆ ಕೊಲೆ ಆರೋಪಿಗೆ ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ.
2015ರ ಜನವರಿ 3ರಂದು ರೌಡಿಶೀಟರ್ ದೀಪು ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ 24ನೇ ಆರೋಪಿಯಾಗಿದ್ದಾರೆ. ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ ಎನ್ನಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: