ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಪ್ರಧಾನಿ ಮೋದಿ ಯಾಕೆ ಮೌನ; ಕಾಂಗ್ರೆಸ್ ಪ್ರಶ್ನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ದಿನಗಳಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದನ್ನು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದ್ದು, ಈ ಪ್ರದೇಶದಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿಯ ಜೋರಾಗಿ ಎದೆ ಬಡಿದುಕೊಂಡು ಹೇಳುತ್ತಿರುವುದು ಸುಳ್ಳು ಎಂಬುದು ಸಂಪೂರ್ಣವಾಗಿ ಬಹಿರಂಗಗೊಂಡಿದೆ’ ಎಂದು ಆರೋಪಿಸಿದೆ.
ಪಾಕಿಸ್ತಾನದ ನವಾಜ್ ಷರೀಫ್ ಮತ್ತು ಪ್ರಧಾನ ಮಂತ್ರಿ ಶಹಬಾಜ್ ಷರೀಫ್ ತಮಗೆ ತಿಳಿಸಿದ ಶುಭಾಶಯಕ್ಕೆ ಪ್ರತಿಕ್ರಿಯೆ ನೀಡುವುದರಲ್ಲಿ ನಿರತರಾಗಿರುವ ಪ್ರಧಾನಿ ಮೋದಿಗೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾದಲ್ಲಿ ಕಳೆದ ಮೂರು ದಿನಗಳಲ್ಲಿ ಸಂಭವಿಸಿದ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಲು ಸಮಯವಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಪ್ರದೇಶದಲ್ಲಿ ಸಹಜ ಸ್ಥಿತಿ ನೆಲೆಸಿದೆ ಎಂದು ಹೇಳುವ ಮೋದಿ ಸರ್ಕಾರ 10 ವರ್ಷಗಳಲ್ಲಿ ಕಾಶ್ಮೀರದಲ್ಲಿ ದುರಂತಮಯ ಪರಿಸ್ಥಿತಿ ನಿರ್ಮಾಣ ಮಾಡಿದೆ. ಹೇಡಿತನದ ಭಯೋತ್ಪಾದಕ ಕೃತ್ಯಗಳಿಗೆ ಅಲ್ಲಿನ ಮುಗ್ಧ ಜನರು ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮುಂದುವರಿಯುತ್ತಲೇ ಇವೆ ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ದೂರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth