ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನರಿಗೆ ತೊಡಕಾಗದಿರಲಿ : ಚಂದ್ರಶೇಖರ ಕೆ.ಪಲ್ಲತ್ತಡ್ಕ - Mahanayaka

ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನರಿಗೆ ತೊಡಕಾಗದಿರಲಿ : ಚಂದ್ರಶೇಖರ ಕೆ.ಪಲ್ಲತ್ತಡ್ಕ

Chandrasekhara K Pallattadka
14/11/2024

ದಕ್ಷಿಣ ಕನ್ನಡ: ಪಶ್ಚಿಮ ಘಟ್ಟವನ್ನು ಉಳಿಸಬೇಕು ಎನ್ನುವ ವಿಷಯಕ್ಕೆ ಮಲೆನಾಡಿನ ಜನರ ಸಹಮತವಿದೆ. ಆದರೆ ಈ ಉದ್ದೇಶ ಈಡೇರಿಕೆಗಾಗಿ ಮಲೆನಾಡಿನ ಜನರ ಬದುಕಿನ ಮೇಲೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕೆ.ಪಲ್ಲತ್ತಡ್ಕ ಹೇಳಿದ್ದಾರೆ.

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ಮಲೆನಾಡಿನ ಜನರ ಬದುಕನ್ನು ಅತಂತ್ರಗೊಳಿಸಲು ಸರ್ಕಾರಗಳು ಮುಂದಾಗಿದೆ. ಇದನ್ನು ನಮ್ಮ ಸಂಘಟನೆ ಪಕ್ಷ, ಜಾತಿ ಮರೆತು ವಿರೋಧಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿ ಸಿದ್ಧಪಡಿಸುವಾಗ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಮಾಡಿದ ವರದಿಯಾಗಿದೆ. ಈ ವರದಿ ಅನುಷ್ಠಾನಗೊಂಡರೆ ಪರಿಸರ ಸಂರಕ್ಷಣೆ ಅಸಾಧ್ಯ. ಪ್ರಸ್ತುತ ಜಾರಿಯಲ್ಲಿ ಇರುವ ಕಾನೂನುಗಳ ಮೂಲಕವೇ ಅರಣ್ಯ ಸಂರಕ್ಷಣೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಘಟ್ಟ ಉಳಿಸಬೇಕು ಎಂಬ ಹೋರಾಟ ಮಾಡಿದವರೇ ಮಲೆನಾಡಿಗರು ಮತ್ತು ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಮೂಲನಿವಾಸಿ ಅರಣ್ಯವಾಸಿಗಳೇ ಹೊರತು ಅಧಿಕಾರಿಗಳು ಅಥವಾ ಯಾವುದೇ ಸರ್ಕಾರಗಳು ಅಲ್ಲ. ಆದುದರಿಂದ ಸರಕಾರ ಸರಿಯಾದ ತೀರ್ಮಾನಕ್ಕೆ ಬಂದು ಮಲೆನಾಡಿಗರಿಗೆ ರಕ್ಷಣೆ ಒದಗಿಕೊಡಬೇಕೆಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ