ಸರ್ಕಾರ ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಿದೆ: ಕುಮಾರಸ್ವಾಮಿ - Mahanayaka
3:32 AM Saturday 18 - October 2025

ಸರ್ಕಾರ ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಿದೆ: ಕುಮಾರಸ್ವಾಮಿ

praveen nettaru house
01/08/2022

ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ


Provided by

ಮಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು.

ಇದೇ ವೇಳೆ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್  ಸದಸ್ಯ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಜತೆಯಲ್ಲಿದ್ದರು.

praveen nettaru house

ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ,  ಸರಕಾರವು ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್.ಐ.ಎ. ವಹಿಸಿದೆ. ಈ ಪ್ರಕರಣವನ್ನು ಕಾಟಾಚಾರಕ್ಕೆ ತನಿಖೆ ನಡೆಸಬೇಡಿ. ಇದರಲ್ಲಿ ಸತ್ಯಾಂಶ ಏನು, ಇದರ ಹಿಂದಿರುವ ಎಂತಹ ದೊಡ್ಡ ಶಕ್ತಿಗಳೇ ಇರಲಿ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ