ಜಮ್ಮು ಕಾಶ್ಮೀರದಲ್ಲಿ ಒಂದೇ ತಿಂಗಳಲ್ಲಿ ಐದನೇ ಭಯೋತ್ಪಾದಕ ದಾಳಿ

ಜಮ್ಮು ಕಾಶ್ಮೀರದಲ್ಲಿ ಒಂದೇ ತಿಂಗಳಲ್ಲಿ ಐದನೇ ಭಯೋತ್ಪಾದಕ ದಾಳಿ ವರದಿಯಾಗಿದೆ. ಇದರ ಹಿಂದೆಯ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳ ದಾಲೀಯೂ ಮುಂದುರೆದಿದೆ. ನಿರಂತರ ಭಯೋತ್ಪಾದನಾ ದಾಳಿಗಳಿಗೆ ಪರಿಹಾರವು ಬಲವಾದ ಕ್ರಮಗಳಿಂದ ಬರುತ್ತದೆ ಹೊರತು ಪೊಳ್ಳು ಭಾಷಣ ಮತ್ತು ಸುಳ್ಳು ಭರವಸೆಗಳಿಂದ ಅಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಐದು ಸೈನಿಕರು ಹುತಾತ್ಮರಾದ ಬಳಿಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕಥುವಾ ಪಟ್ಟಣದಿಂದ 150 ಕಿಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ 3.30 ರ ಸುಮಾರಿಗೆ ಮಚೇಡಿ-ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ಎಸೆದು ಗುಂಡಿನ ದಾಳಿ ನಡೆಸಿದರು.
ಮೋದಿ ಸರ್ಕಾರ ಮೂರನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಜಮ್ಮು ಕಾಶ್ಮೀರದಲ್ಲಿ ಒಂದೇ ತಿಂಗಳಲ್ಲಿ ನಡೆದ ಐದನೇ ಭಯೋತ್ಪಾದಕ ದಾಳಿ ಇದಾಗಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕಿ ಮೆಹಬೂಬಾ ಮುಫ್ತಿ, ಯೋಧರ ಮರಣವು ಜಮ್ಮು ಕಾಶ್ಮೀರದಲ್ಲಿನ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಹೇಳುತ್ತಿದೆ ಎಂದು ಹೇಳಿದ್ದಾರೆ.
ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಚಾರವೇ ಗುರಿಯಾದಾಗ ನಿಜವಾದ ಸುರಕ್ಷತಾ ಚಟುವಟಿಕೆ ಅದಕ್ಕೆ ಬಲಿಯಾಗುತ್ತದೆ ಎಂದು ಹೇಳಿದ್ದಾರೆ.
ಗೃಹ ಸಚಿವರ, ಪ್ರಧಾನ ಮಂತ್ರಿಯವರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಕ್ಷಣಾ ಸಚಿವರ ಮೌನವನ್ನು ಉದ್ಧವ್ ಠಾಕ್ರೆ ಬಣದ ಶಿವಸೇನೆಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಪ್ರಶ್ನಿಸಿದ್ದಾರೆ.
ಕಳೆದ ಸುಮಾರು ನಾಲ್ಕು ವರ್ಷಗಳಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು 2023ರಲ್ಲಿ ಡೆಕ್ಕನ್ ಹೆರಾಲ್ಡ್ ಅಧಿಕೃತ ಮಾಹಿತಿ ಬಹಿರಂಗಪಡಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth