ತೆಲಂಗಾಣ ಹೊಸ ರಾಜ್ಯ ಸಚಿವಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರು - Mahanayaka
3:40 PM Wednesday 10 - September 2025

ತೆಲಂಗಾಣ ಹೊಸ ರಾಜ್ಯ ಸಚಿವಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರು

new telangana secretariat
16/09/2022

ಹೈದರಾಬಾದ್: ತೆಲಂಗಾಣದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿಡಲು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(KCR) ನಿರ್ಧರಿಸಿದ್ದಾರೆ.


Provided by

ರಾಜ್ಯ ಸಚಿವಾಲಯಕ್ಕೆ ಅಂಬೇಡ್ಕರ್ ಹೆಸರಿಡಲು ತೆಲಂಗಾಣ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಕೆಸಿಆರ್ ತಿಳಿಸಿದ್ದಾರೆ.

ಈ ನಡುವೆ ರಾಜ್ಯ ಸಚಿವಾಲಯಕ್ಕೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂಬ ತೆಲಂಗಾಣ ಸರ್ಕಾರದ ಬೇಡಿಕೆಯನ್ನ ಪರಿಗಣಿಸಲು ಸಿಎಂ ಕೆಸಿಆರ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್


ರಾಜ್ಯದ ಆಡಳಿತ ಕೇಂದ್ರವಾದ ರಾಜ್ಯ ಸಚಿವಾಲಯಕ್ಕೆ ಸಾಮಾಜಿಕ ತತ್ವಜ್ಞಾನಿ ಮತ್ತು ವಿಚಾರವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಸಂಸತ್ ಭವನಕ್ಕೆ ಇಡುತ್ತಿರುವುದು ತೆಲಂಗಾಣ ಜನತೆಗೆ ಹೆಮ್ಮೆಯ ಕ್ಷಣವಾಗಿದೆ. ಈ ನಿರ್ಧಾರ ಭಾರತಕ್ಕೆ ಮಾದರಿಯಾಗಿದೆ. ನಮ್ಮ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಕ್ಕೆ ಬದ್ಧವಾಗಿದೆ. ಭಾರತದ  ಎಲ್ಲ ಜನರು ಸಮಾನ ಗೌರವ ಪಡೆಯಬೇಕು ಎಂದು ಕೆ.ಸಿ.ಆರ್ ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ