ಸರ್ಕಾರಿ ನೌಕರಿಗೆ ಕಾಯುತ್ತಿದ್ದವರಿಗೆ  ಸಿಹಿ ಸುದ್ದಿ: ವಿವಿಧ ಇಲಾಖೆಗಳಲ್ಲಿವೆ ಉದ್ಯೋಗ - Mahanayaka

ಸರ್ಕಾರಿ ನೌಕರಿಗೆ ಕಾಯುತ್ತಿದ್ದವರಿಗೆ  ಸಿಹಿ ಸುದ್ದಿ: ವಿವಿಧ ಇಲಾಖೆಗಳಲ್ಲಿವೆ ಉದ್ಯೋಗ

kea recruitment
02/01/2025


Provided by

KEA Recruitment lists 2025 — ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯದ ವಿವಿಧ ನಿಗಮ, ಇಲಾಖೆಗಳ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ನೇಮಕಾತಿ ಕುರಿತು ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಿದೆ. ಇದಕ್ಕೆ ಸಂಬಂಧಿತ ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸುವುದಾಗಿ ತಿಳಿಸಿದೆ.

ಅದೇ ರೀತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವರವಾದ ಅಧಿಸೂಚನೆಯನ್ನು ಯಾವ ಕಾರಣದಿಂದಾಗಿ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ ಎಂಬುದರ ಕುರಿತು ಕೂಡ ಕಾರಣವನ್ನು ನೀಡಿದೆ.

ಯಾವ ಯಾವ ಇಲಾಖೆಗಳಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೃಷಿ ಮಾರಾಟ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ.

ಈ ವಿವಿಧ ಇಲಾಖೆ, ನಿಗಮ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಹಲವಾರು ವಿವಿಧ ಹುದ್ದೆಗಳು ಖಾಲಿ ಇವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇಲೆ ವಿವರಿಸಿರುವಂತಹ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಬೇಕಾಗಿರುವ ಅಧಿಸೂಚನೆಗಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಇದರ ಮಧ್ಯೆ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 388 ಸೆನನಿ 2024 ದಿನಾಂಕ 25.11.2024 ರಂತೆ ಹೊಸ ಅಧಿಸೂಚ ಹೊರಡಿಸಲು ಸಾಧ್ಯವಾಗಿರುವುದಿಲ್ಲ ಎಂದು ತನ್ನ ಪ್ರಕಟಣೆಯಲ್ಲಿ KEA ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ KEAಯಿಂದ ಕಿವಿ ಮಾತು :

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ನಡೆಸುತ್ತಿರುವಂತಹ ಅಭ್ಯರ್ಥಿಗಳು ಮೇಲೆ ತಿಳಿಸಿರುವ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳಿಗೆ ನಿಗದಿಯಾಗಿರುವ ಪಠ್ಯಕ್ರಮದಂತೆ ಅಭ್ಯಾಸ ಮಾಡಲು ತಿಳಿಸಿದೆ ಹಾಗೂ ಕರ್ನಾಟಕ ಸರ್ಕಾರದಿಂದ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲು ಅನುಮತಿ ಸಿಕ್ಕ ತಕ್ಷಣವೇ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಿದೆ.

KEA ಹೊರಡಿಸಿರುವ ಪ್ರಕಟಣೆ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:  https://cetonline.karnataka.gov.in/kea/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ