5:30 PM Thursday 27 - November 2025

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!: ಪೋಸ್ಟ್ ಹಂಚಿಕೊಂಡ ಡಿ.ಕೆ.ಶಿವಕುಮಾರ್

d k shivakumar latest photos
27/11/2025

ಬೆಂಗಳೂರು: ಅಧಿಕಾರ ಹಂಚಿಕೆಯ ಕಚ್ಚಾಟ ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ನಲ್ಲಿ ಮಾರ್ಮಿಕವಾದ ಪೋಸ್ಟ್ ವೊಂದನ್ನು ಮಾಡಿದ್ದು, ‘ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತೆ’ ಸಂದೇಶ ಪ್ರಕಟಿಸಿದ್ದಾರೆ.

ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿರುವ ಡಿ.ಕೆ.ಶಿವಕುಮಾರ್,  ವರ್ಡ್ ಪವರ್ ಈಸ್ ವರ್ಲ್ಡ್ ಪವರ್, ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿ ಜತೆ ಡಿ.ಕೆ.ಶಿವಕುಮಾರ್ ಸಹ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆ ಮಾತುಕತೆ ಗುಟ್ಟನ್ನು ಬಿಟ್ಟುಕೊಟ್ಟಿಲ್ಲಆದರೆ, ತಮ್ಮ ಗುರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಸೀಟು ಪಡೆಯುವುದು ಮತ್ತು ದೇಶದಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಮಾಡುವುದಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ತಮ್ಮ ಪೋಸ್ಟ್ ಮೂಲಕ, ಈ ಹಿಂದೆ ನಡೆದಿದೆ ಎನ್ನಲಾಗಿರುವ ರಹಸ್ಯ ಒಪ್ಪಂದವನ್ನು ಹೈಕಮಾಂಡ್ ಹಾಗೂ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ನೆನಪಿಸಿದ್ದಾರೆ. ಈ ಮೂಲಕ ಒತ್ತಡ ತಂತ್ರವನ್ನು ಅನುಸರಿಸಿದ್ದಾರೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version