ಕಾವೇರಿದ ದಿಲ್ಲಿ ಎಲೆಕ್ಷನ್ ಅಖಾಡ: ಪ್ರಧಾನಿ ಮೋದಿಗೆ ಪತ್ರ ಬರೆದ ಕೇಜ್ರಿವಾಲ್! - Mahanayaka

ಕಾವೇರಿದ ದಿಲ್ಲಿ ಎಲೆಕ್ಷನ್ ಅಖಾಡ: ಪ್ರಧಾನಿ ಮೋದಿಗೆ ಪತ್ರ ಬರೆದ ಕೇಜ್ರಿವಾಲ್!

28/01/2025

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌, ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಷೇಧಿಸಲು ರಾಷ್ಟ್ರವ್ಯಾಪಿ ಕಾನೂನು ರೂಪಿಸುವಂತೆ ಒತ್ತಾಯಿಸಿದ್ದಾರೆ. ಇದೊಂದು ದೊಡ್ಡ ಹಗರಣವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಮಯ ಬಂದಿದೆ ಎಂದೂ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಸಾವಿರಾರು ಕೋಟಿ ಮೌಲ್ಯದ ಕಾರ್ಪೋರೇಟ್‌ ಸಾಲಗಳನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರವು ಶ್ರೀಮಂತರ ಪರ ನಿಂತಿದೆ ಎಂದು ಆರೋಪಿಸಿದರು.

‘ಕಾರ್ಪೋರೇಟ್‌ ಸಾಲ ಮನ್ನಾದಿಂದ ತೆರಿಗೆ ಹೊರೆಯು ಸಾಮಾನ್ಯ ಜನರ ಮೇಲೆ ಬೀಳುತ್ತಿದ್ದು, ಇದರ ಲಾಭವನ್ನು ಶ್ರೀಮಂತರು ಪಡೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.
‘ಸಾಮಾನ್ಯ ಜನರು ತಮ್ಮ ಅರ್ಧದಷ್ಟು ಸಂಬಳವನ್ನು ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ಶ್ರೀಮಂತರ ಸಾಲಗಳು ಮನ್ನಾ ಆಗುತ್ತಿವೆ. ಕೇಂದ್ರ ಸರ್ಕಾರವು ಸಾಮಾನ್ಯ ಜನರ ಗೃಹ ಸಾಲ, ವಾಹನ ಸಾಲ ಮತ್ತು ಇತರ ಆರ್ಥಿಕ ಹೊರೆಯನ್ನು ಮನ್ನಾ ಮಾಡುವುದಿಲ್ಲ ಏಕೆ’ ಎಂದು ಪ್ರಶ್ನಿಸಿದ್ದಾರೆ.

ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಲ್ಲಿಸುವುದರಿಂದ ಆದಾಯ ತೆರಿಗೆ ಮತ್ತು ಜಿಎಸ್‌ಟಿ ದರಗಳನ್ನು ಅರ್ಧದಷ್ಟು ಕಡಿಮೆ ಮಾಡಲು, ತೆರಿಗೆ ವಿಧಿಸಬಹುದಾದ ಆದಾಯ ಮಿತಿಯನ್ನು ದ್ವಿಗುಣಗೊಳಿಸಲು, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಲು ಸರ್ಕಾರಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ