ಕೆಲಸ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಗೆ ಪಂಗನಾಮ: ನಾಲ್ವರ ಬಂಧನ - Mahanayaka
12:25 AM Thursday 21 - August 2025

ಕೆಲಸ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಗೆ ಪಂಗನಾಮ: ನಾಲ್ವರ ಬಂಧನ

vanchane
19/08/2022


Provided by

ಮಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ  ಮಂಗಳೂರಿನಲ್ಲಿ ನಡೆದಿದೆ.

ಪ್ರಮುಖ ಆರೋಪಿ ರಾಮ್‌ ಪ್ರಸಾದ್‌, ಹೇಮಂತ್‌, ಸುರೇಂದ್ರ ರೆಡ್ಡಿ, ದರ್ಶನ್‌ ಬಂಧಿತ ಆರೋಪಿಗಳು. ರಾಮ್‌ ಪ್ರಸಾದ್‌ ತಾನು ಕೆಎಂಎಫ್‌ ಉದ್ಯೋಗಿ ಎಂದು ತಿರುಗಾಡುತ್ತಿದ್ದ. ನಿರುದ್ಯೋಗಿಗಳಿಗೆ ಮಂಗಳೂರಿನ  ಕೆಎಂಎಫ್‌ನ ವಿವಿಧ ವಿಭಾಗಗಳಲ್ಲಿ  ಕೆಲಸ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ವಸೂಲಿ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೆಲಸ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿಗಿಂತಲೂ ಅಧಿಕ ಹಣವನ್ನು ಪಡೆದುಕೊಂಡು ನಕಲಿ ಕೆಎಂಎಫ್ ಐಡಿ ಕಾರ್ಡ್‌, ನೇಮಕಾತಿ ಪತ್ರ ನೀಡಿ ಮೋಸ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ